ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದು ಪಡಿಸಿದ್ದು, ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ಮಹೇಶ್ ತಿಮರೋಡಿಯನ್ನು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಸಪ್ಟೆಂಬರ್ 20ರಂದು ಮಂಗಳೂರಿನಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿತ್ತು.


Share with

Leave a Reply

Your email address will not be published. Required fields are marked *