ವಿಧಾನಸಭೆಯಲ್ಲಿ ಹೈಡ್ರಾಮಾ: ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದ 10 ಬಿಜೆಪಿ ಸದಸ್ಯರ ಅಮಾನತು

Share with

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯ ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಮಾಡಿದ್ದಾರೆ. ಈ 10 ಸದಸ್ಯರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.

ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯುಟಿ ಖಾದರ್ ಅವರಿ​ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ. ಇದೀಗ ಈ ದೂರಿನ ಅಧಾರದ ಮೇಲೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿ, ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ರಮ ಕೈಗೊಂಡಿರುವ ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.


Share with

Leave a Reply

Your email address will not be published. Required fields are marked *