ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿಯಾಗಿ DR ASI ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಈ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. D.R ASI ಎಲ್ಲಪ್ಪ ಕುಂಬಾರ್ ಮೃತ ದುರ್ದೈವಿ. ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಯಲ್ಲಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ.




