ಮಂಗಳೂರು : ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,
ನಾಳೆ 2 ಆಗಸ್ಟ್ ರಂದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆ, ಭಾರತೀಯ ಹವಮಾನ ಇಲಾಖೆ ಮತ್ತು ಕಾರ್ನಾಟಕ ರಾಜ್ಯ ವಿಕೋಪ ಉಸ್ತುವಾರಿ ಕೇಂದ್ರ ಮುಂಜಾಗೃತ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಘೋಷಿಸಲಾಗಿಲ್ಲ.ಇನ್ನು ಮೀನುಗಾರರನ್ನು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.