ಪುತ್ತೂರು : ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಆ02 ರಂದು ಹೊರಡಿಸಿದ ಆದೇಶದ ಪ್ರಕಾರ, ಆಗಸ್ಟ್ 03, 2026ರಂದು ಜಿಲ್ಲೆಯ ಪುತ್ತೂರು ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ, ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ಉಪವಿಭಾಗದ ಮಂಗಳೂರು,ಬಂಟ್ವಾಳ, ಉಳ್ಳಾಲ ಮೂಡಬಿದ್ರೆ, ಮೂಲ್ಕಿ ತಾಲೂಕುಗಳ ಎಲ್ಲ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರು ನದಿ, ಹೊಳೆ, ಸಮುದ್ರ ತೀರ ಹಾಗೂ ಗುಡ್ಡ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ನೀಡಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ 1077 ಅನ್ನು ಸಂಪರ್ಕಿಸುವಂತೆ ಮನವಿ ಮಾಡಿದೆ.




