ಭಾರಿ ಮಳೆ: ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ರಜೆ

Share with

ಬೆಳ್ತಂಗಡಿ/ ಬಂಟ್ವಾಳ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರದಂದು ತಹಶೀಲ್ದಾರ್ ಅವರು ರಜೆಯನ್ನು ಘೋಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈ-ಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.


Share with

Leave a Reply

Your email address will not be published. Required fields are marked *