
ಅರಸೀಕೆರೆ: ಸಿಡಿಲು ಬಡಿದು ಮನೆಯ ಬೆಂಕಿ ಹೊತ್ತಿಕೊಂಡ ಘಟನೆ
ತಾಲೂಕಿನ ಚಕ್ಕೂರು ಗ್ರಾಮದಲ್ಲಿ ಸಂಭವಿಸಿದ್ದು,ಭಾರೀ ಅನಾಹುತ ಸಂಭವಿಸಿರುವ ಘಟನೆ ವರದಿಯಾಗಿದೆ . ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡ ಪರಿಣಾಮ ಮನೆಯ ಮೇಲ್ಛಾವಣಿ ಹಾಗೂ ಕಟ್ಟಡದ ಭಾಗಗಳು ಬೆಂಕಿಗೆ ಆವತಿಯಾಗಿದು ದಟ್ಟ ಹೊಗೆ ಆವರಿಸಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವಲ್ಲಿ ಯಶಸ್ಸು . ಅಗ್ನಿ ಅವಘಡಕ್ಕೆ ನಿಖರವಾದ ಕಾರಣವೇನು, ಘಟನೆಯಲ್ಲಿ ಎಷ್ಟು ಪ್ರಮಾಣದ ಆಸ್ತಿ ಹಾನಿಯಾಗಿದೆ ಹಾಗೂ ಯಾವುದೇ ಪ್ರಾಣಾಪಾಯ ಸಂಭವಿಸಿದೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಘಟನೆಯಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಅಗ್ನಿ ಅವಘಡದ ಸಂಪೂರ್ಣ ವಿವರಗಳು ನಿರೀಕ್ಷಿಸಲಾಗುತ್ತಿದೆ.




