ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿಗೆ ಮನೆ ಗೋಡೆ ಕುಸಿದಿದೆ.
ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಗೋಡೆ ಮನೆಯ ಹೊರಭಾಗಕ್ಕೆ ಬಿದ್ದಿದೆ. ಒಳ ಭಾಗಕ್ಕೆ ಬಿದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಗೋಡೆ ಕುಸಿತದಿಂದ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.