ಅಯೋಧ್ಯೆಯಲ್ಲಿ ಮನೆ ಮಾಡಿದ ಸಂಭ್ರಮ: ರಾಮಮಂದಿರದತ್ತ ಹರಿದು ಬರುತ್ತಿದೆ ಗಣ್ಯರ ದಂಡು

Share with

ಅಯೋಧ್ಯ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬೆಳಿಗ್ಗೆಯಿಂದಲೇ ಸಂತರು, ಗಣ್ಯರ ದಂಡೆ ರಾಮಮಂದಿರದತ್ತ ಬರುತ್ತಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ 51 ಇಂಚಿನ ಬಾಲರಾಮನ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ನೆರವೇರುವುದರೊಂದಿಗೆ ಮಂದಿರದ ಉದ್ಘಾಟನೆಯೂ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಅತಿಥಿಗಳು ಈ ದಿವ್ಯ ಘಳಿಗೆಗೆ ಪ್ರತ್ಯಕ್ಷ ಸಾಕ್ಷಿಯಾಗಲಿದ್ದಾರೆ.

ರಾಮಮಂದಿರ ಎದುರು ಭಕ್ತರು ಜಮಾಯಿಸಿದ್ದಾರೆ. ಕಲಾ ತಂಡಗಳು ನೃತ್ಯ ಪ್ರದರ್ಶಿಸಿ ರಾಮನನ್ನು ಭಜಿಸುತ್ತಿವೆ. ಬೆಳಗ್ಗೆ 11ಗಂಟೆಯಿಂದ 12ರವರೆಗೆ ರಾಮ ಮಂದಿರ ವೀಕ್ಷಣೆ, ರಾಮಜನ್ಮಭೂಮಿ ಆವರಣದಲ್ಲಿ ಪ್ರಧಾನಿ ಮೋದಿ ಸಂಚರಿಸಲಿದ್ದಾರೆ. ನಂತರ ಮಧ್ಯಾಹ್ನ 12.05ರಿಂದ 12.55ರವರೆಗೆ ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಪ್ರಧಾನಿ ಮೋದಿ ಮಧ್ಯಾಹ್ನ 12.55ಕ್ಕೆ ಹೆಲಿಕಾಪ್ಟರ್‌ನಿಂದ ರಾಮಮಂದಿರದ ಮೇಲೆ ಪುಷ್ಪವೃಷ್ಟಿಯನ್ನು ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಇತರ ಭಕ್ತರಿಗೆ ಅವಕಾಶ ದೊರೆಯಲಿದೆ.


Share with

Leave a Reply

Your email address will not be published. Required fields are marked *