ಉಡುಪಿ: ನನ್ನ ಮಗ ಕಾಂತೇಶ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಕೊಲ್ಲೂರು ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂತೇಶ್ ಗೆ ಟಿಕೆಟ್ ಸಿಕ್ಕಿ ಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ. ರಾಜ್ಯದಲ್ಲೂ, ದೇಶದಲ್ಲೂ ಬಿಜೆಪಿ ಜಯ ಪಡೆಯಲಿ ಎಂದು ಪ್ರಾರ್ಥಿಸಿದ್ದೇನೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ, ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇವೆ ಎಂದರು.
ವೈರಲ್ ಆಗುತ್ತಿರುವ ವಿಚಾರಗಳ ಬಗ್ಗೆ ಇಲ್ಲಿ ನಾನು ಮಾತನಾಡಲ್ಲ. ದೇವಸ್ಥಾನದಲ್ಲಿ ಒಳ್ಳೆಯ ವಿಚಾರಗಳನ್ನು ಮಾತನಾಡಲು ಇಷ್ಟಪಡುತ್ತೇನೆ. ಕಾಂತೇಶ್ ಗೆ ಟಿಕೆಟ್ ಸಿಗುತ್ತೆ, ಅವನು ಚುನಾವಣೆ ಗೆಲ್ತಾನೆ, ಮೋದಿ ಪ್ರಧಾನಿ ಆಗುತ್ತಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.