ನನ್ನ ಜನ್ಮ ದಿನಾಂಕ ಗೊತ್ತಿಲ್ಲ. ಹೀಗಾಗಿ, ನನಗೆ ಹುಟ್ಟುಹಬ್ಬ ಬಗ್ಗೆ ಯಾವುದೇ ಆಸಕ್ತಿಯಿಲ್ಲ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಗಸ್ಟ್ 3 ಮತ್ತು ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು. ಒಂದು ನನ್ನ ಮೇಷ್ಟ್ರು ಬರೆಸಿರುವುದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರುವುದು. ಹೀಗಾಗಿ ಎರಡು ದಿನಾಂಕವೂ ತಪ್ಪು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೆಲ ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಇಂದು ಕೂಡ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಕೋರಿದ್ದಾರೆ.