ತಾವಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನುವ ಮೂಲಕ ನಟ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಪ್ತ ಸಾಗರದಾಚೆ ಎಲ್ಲೊ ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿ ‘ನಾನಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಬದಲಿಗೆ ಹೆಚ್ಚು ಸಿನಿಮಾ ನಿರ್ದೇಶನ ಮಾಡುತ್ತೇನೆ. ನನ್ನ ಸಿನಿಮಾಗಳಲ್ಲಿ ಅಭಿನಯಿಸುತ್ತೇನೆ. ಆದರೆ ನಟಿಸಬೇಕೆಂಬ ಕಾರಣಕ್ಕೆ ಸಿಕ್ಕ-ಸಿಕ್ಕ ಸಿನಿಮಾಗಳಲ್ಲಿ ನಟಿಸುವುದಿಲ್ಲ’ ಎನ್ನುವ ಮೂಲಕ ಅಚ್ಚರಿಯ ಹೇಳಿಕೆ ಹೇಳಿದ್ದಾರೆ.