ಮಾಜಿ DCM ಕೆ.ಎಸ್. ಈಶ್ವರಪ್ಪಗೆ ಶಾಕ್ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್ ನೀಡಿದೆ. ಈಶ್ವರಪ್ಪ, ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ದೂರು ದಾಖಲಾಗಿದೆ. ಈಶ್ವರಪ್ಪ ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆಂದು ವಕೀಲ ವಿನೋದ್ 2012ರಲ್ಲಿ ಕೇಸ್ ದಾಖಲಿಸಿದ್ದರು. ವಿಚಾರಣೆ ನಡೆಸಿದ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ 2025 ಏಪ್ರಿಲ್ 5, FIR ದಾಖಲಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.





