ಉಡುಪಿ ಅಬಕಾರಿ ಡಿಸಿ ಬಳಿ 8.69 ಕೋ.ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Share with

ಉಡುಪಿ: ರಾಜ್ಯದ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 8.69 ಕೋ. ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ಮಾ.11ರಿಂದ ಮಾ. 12ರವರೆಗೆ ಎರಡು ದಿನಗಳ ಕಾಲ ಅಧಿಕಾರಿಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

ಶೋಧದ ವೇಳೆ ಒಟ್ಟು 6,90,64,716 ರೂ. ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ಇದರಲ್ಲಿ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದೆ. ಇದಲ್ಲದೆ 3,95, 941ರ. ನಗದು, 1,47,50,506 . ಮೌಲ್ಯದ ಚಿನ್ನಾಭರಣಗಳು, 17,00,000 ರೂ. ಮೌಲ್ಯದ ವಾಹನಗಳು, 25,75,000 ಬ್ಯಾಂಕ್ ಠೇವಣಿಗಳು ಹಾಗೂ 72,68,554 . ಮೌಲ್ಯದ ಇತರ ವಸ್ತುಗಳು ಪತ್ತೆಯಾಗಿದ್ದು, ಒಟ್ಟು 2,66,90,001 ರೂ. ಮೌಲ್ಯದ ಚರಾಸ್ತಿಯೂ ಪತ್ತೆಯಾಗಿದೆ.

ಈ ಎಲ್ಲ ಆಸ್ತಿಗಳನ್ನು ಸೇರಿಸಿ ಒಟ್ಟು ಸುಮಾರು 8.69 ಕೋ. ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಉಡುಪಿ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ತನಿಖೆ ನಡೆಯುತ್ತಿದೆ.


Share with

Leave a Reply

Your email address will not be published. Required fields are marked *