ಕಾಸರಗೋಡಿಗೆ 16 ಗೋವುಗಳ ಅಕ್ರಮ ಸಾಗಾಟ..; ಪಣಂಬೂರಿನಲ್ಲಿ ಪೊಲೀಸ್ ದಾಳಿ– ಕಾರ್ಯಾಚರಣೆ

Share with

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ಬೈಕಂಪಾಡಿ ಬಳಿ ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ನಿನ್ನೆ (ನ.4ರ ಬುಧವಾರ) ತಡರಾತ್ರಿ ಘಟನೆ ನಡೆದಿದೆ.

ಬೆಳಗಾವಿಯಿಂದ ಕಾಸರಗೋಡಿಗೆ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಬೈಕಂಪಾಡಿ ಬಳಿ ದಾಳಿ ನಡೆಸಿದ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಯಾವುದೇ ಪರವಾನಗಿ ಇಲ್ಲದೆ 16 ಗೋವುಗಳನ್ನು ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ತಕ್ಷಣವೇ 16 ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಲಾರಿ ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗೋವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ಈ ಸಾಗಾಟದ ಹಿಂದೆ ದೊಡ್ಡ ಜಾಲವಿದೆಯೇ, ಇನ್ನೂ ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *