ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ; 30 ವಾಹನಗಳ ವಿರುದ್ಧ ಪ್ರಕರಣ

Share with

ಮಂಗಳೂರು: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ವಾಹನಗಳಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ವಾಹನಗಳ ವಿರುದ್ಧ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯಿಂದ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸುಮಾರು 30 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಬಂಧಪಟ್ಟ ವಾಹನಗಳ ಮಾಲಕರಿಗೆ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಮಂಗಳೂರು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *