ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ವಿಮಾನ ನಿಲ್ದಾಣಕ್ಕೆ ಸೆಪ್ಟೆಂಬರ್ 23 ಮತ್ತು 24ರಂದು ಬಂದ ಅಂತರರಾಷ್ಟ್ರೀಯ ವಿಮಾನಗಳಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿತ್ತು.
ವಿವಿಧ ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಯಾಣಿಕರಿಂದ 775 ಗ್ರಾಮ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ ರುಪಾಯಿ 46,52,270 ಎಂದು ಅಂದಾಜಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಐವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.