ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Share with

ಸಿರುಗುಪ್ಪ: ನಗರದ ಬೈಪಾಸ್ ರಸ್ತೆಯ ಮೂಲಕ ಸಿಂಧನೂರು ರಸ್ತೆಗೆ ತೆರಳುತ್ತಿದ್ದ ಆಟೋದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಸಿರುಗುಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ಎಂ. ವಿಜಯ್ ಕುಮಾರ್ ಹಾಗೂ ಪೊಲೀಸ್ ಠಾಣೆಯ ಪಿ ಎಸ್ ಐ ಪರಶುರಾಮ ನೇತೃತ್ವದ ತಂಡ ದಾಳಿ ನಡೆಸಿ ₹16,100 ಮೌಲ್ಯದ 20 ಮೂಟೆಗಳಲ್ಲಿದ್ದ ಒಟ್ಟು 7 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಆಟೋ ಮೇಲೆ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಆಟೋ ಚಾಲಕನ ವಿರುದ್ಧ ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *