ಬರ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ

Share with

ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ.

ಮೈಸೂರು: ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. 2021ರಲ್ಲಿ ಕೋವಿಡ್‌ ಕಾರಣದಿಂದಾಗಿ ಸರಳ ದಸರಾ ಆಚರಿಸಲಾಗಿತ್ತು, ಜಂಬೂ ಸವಾರಿ ಮೆರವಣಿಗೆ ನಡೆದರೂ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕಳೆದ ವರ್ಷ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗಿದ್ದು, ಆದರೆ ಈ ಬಾರಿ ಮಳೆ ಕೊರತೆಯಿಂದಾಗಿ ಬರ ವ್ಯಾಪಿಸಿರುವುದರಿಂದ ಸರಳ ದಸರಾ ಆಚರಣೆಗೆ ಸರ್ಕಾರವು ನಿರ್ಧರಿಸಿದೆ.


Share with

Leave a Reply

Your email address will not be published. Required fields are marked *