
ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಿಗೆ ಎಚ್ಚರಿಕೆ ನೀಡಿದೆ. ಸುಂಡಿಕೆರೆ, ಎಸ್ಟೇಟ್, ಕಬ್ಬಿನಹಳ್ಳಿ, ಬಿರಡಹಳ್ಳಿ, ಕೆಳಗಳಲೆ, ಕಿರೇಹಳ್ಳಿ, ಹೊಸನಗರ, ಉದೇವಾರ, ಬಾಳುಗೋಡು, ದೀಣಕೆರೆ, ಬಿಳಿಗೆರೆ, ಕಲ್ಲಹಳ್ಳಿ, ಕೆಸಗುಲಿ, ಕಡಗರ್ಜೆ, ಲಿಂಗಾಪುರ, ಮ್ಯಾಲಹಳ್ಳಿ, ಉಲ್ಲೇಮಕ್ಕಿ, ವಾಟೇಹಳ್ಳಿ, ಮತಿಗಳಲೆ, ಕಿರವಾಲೆ, ಹೆಬ್ಬನಹಳ್ಳಿ, ಹೊಸಕೊಪ್ಪಲು, ಚಿನ್ನಿಗರಾಯನಕೊಪ್ಪಲು, ಕಾಟಳಿ, ಹಲಸಲಿಗೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳ ಚಲನವಲನ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾಫಿ ತೋಟ, ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು. ಕಾರ್ಯಾಚರಣೆ ನಡೆಯುವ ಸಂದರ್ಭದಲ್ಲಿ ಅನಗತ್ಯವಾಗಿ ಕಾಡಿನ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಿ, ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ ಮನವಿ ಮಾಡಿದೆ. ಸಾರ್ವಜನಿಕರು ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.




