ವಿಟ್ಲ ಪಟ್ಟಣ ಪಂಚಾಯತ್ 2ನೇ ವಾರ್ಡ್ ನಲ್ಲಿ ನೀರಿಗಾಗಿ ಹಾಹಾಕಾರ; ಬೋರ್ ವೆಲ್ ಇದ್ದರೂ ಪಂಪ್ ಅಳವಡಿಸದ ಪಂಚಾಯತ್; ಮತದಾನ ಬಹಿಷ್ಕಾರಕ್ಕೆ ಸಿದ್ಧತೆ

Share with

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೊಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೋರ್ ವೆಲ್ ಇದ್ದರೂ ಪಂಪ್ ಅಳವಡಿಸದ ಪಂಚಾಯತ್

2ನೇ ವಾರ್ಡ್ ಪೊನ್ನೊಟ್ಟು ಪರಿಸರದಲ್ಲಿ ನೂರಕ್ಕೂ ಅಧಿಕ ಮನೆಗಳಿವೆ. ಈ ಭಾಗಕ್ಕೆ ಕಲ್ಲಕಟ್ಟದಲ್ಲಿರುವ ಬಾವಿಯಿಂದ ನೀರು ಸರಬರಾಜು ಮಾಡಲಾಗುತ್ತಿತ್ತು. ಇದೀಗ ಬಾವಿ ಬತ್ತಿ ಹೋಗಿದೆ. ಜನರು ನೀರಿಗಾಗಿ ಪರದಾಟ ನಡೆಸುವಂತಾಗಿದೆ.

ವಿಟ್ಲ ಪಟ್ಟಣ ಪಂಚಾಯತ್ 2ನೇ ವಾರ್ಡ್ ನಲ್ಲಿ ನೀರಿಗಾಗಿ ಹಾಹಾಕಾರ

ಸಾರ್ವಜನಿಕರ ಮನವಿ ಮೇರೆಗೆ ವಿಟ್ಲ ಸಂತೆ ರಸ್ತೆಯಲ್ಲಿ ಹಳೆಯ ಐಟಿಐ ಬಳಿ ಇರುವ ಹಳೆಯ ಕೊಳವೆ ಬಾವಿಯನ್ನು ದುರಸ್ತಿಗೊಳಿಸುವಂತೆ ಮನವಿ ಮಾಡಿದ ಬಳಿಕ ಅದನ್ನು ದುರಸ್ತಿಗೊಳಿಸಲಾಗಿತ್ತು. ಆದರೆ ಇದುವರೆಗೂ ಅದಕ್ಕೆ ಪಂಪ್ ಅಳವಡಿಸಿಲ್ಲ. ಈ ಬಗ್ಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯಿತಿ ಈ ಭಾಗದ ಸದಸ್ಯರಲ್ಲಿ ವಿಚಾರಿಸಿದಾಗ ನಮ್ಮಲ್ಲಿ ಆಡಳಿತವಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಥಳಕ್ಕೆ ಬಂದು ವೀಕ್ಷಿಸಿ ಹೋಗಿದ್ದಾರೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಈ ಭಾಗದ ಜನರು ಮತದಾನ ಬಹಿಷ್ಕಾರಿಸಲಾಗುವುದು ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *