ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ

Share with

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ) ಬಂಟ್ವಾಳ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಬೊಂಡಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶಂಭೂರಿನಲ್ಲಿ ನಡೆಯಿತು.

ಈ ಟ್ಯೂಷನ್ ಕ್ಲಾಸ್ ಮೂರು ತಿಂಗಳು ನಡೆಯಲಿದ್ದು, ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಭೂರಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ನಾಯಕರವರು ವಹಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ ಶಿಕ್ಷಣಕ್ಕೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಜನಜಾಗೃತಿಯ ಸದಸ್ಯರಾದ ಪುರುಷೋತ್ತಮ ನಾಟಿ, ಅತಿಥಿ ಶಿಕ್ಷಕರಾದಂತಹ ಕುಮಾರಿ ಹರ್ಷ ಹಾಗೂ ಪ್ರಿಯ ಮತ್ತು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಮಲಾಕ್ಷಿ ಅವರು ಉಪಸಿತರಿದ್ದರು.

ಶಾಲಾ ವಿದ್ಯಾರ್ಥಿ ತಕ್ಷಿತ್ ಪ್ರಾರ್ಥಿಸಿ, ಸೇವಾ ಪ್ರತಿನಿಧಿ ಲಕ್ಷ್ಮಿ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಕಮಲಾಕ್ಷರವರು ವಂದಿಸಿ, ವಲಯ ಮೇಲ್ವಿಚಾರಕಿ ಅಮಿತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.


Share with

Leave a Reply

Your email address will not be published. Required fields are marked *