ಮಂಗಳೂರು: ಪತ್ರಕರ್ತರ ಒತ್ತಡದ ಕಾರ್ಯ ನಿರ್ವಹಣೆಯ ನಡುವೆ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಂಡಿರುವುದು ಉತ್ತಮ ಎಂದು ಅಂತರಾಷ್ಟ್ರೀಯ ಮೋಟಾರ್ ರ‍್ಯಾಲಿ ಚ್ಯಾಂಪಿಯನ್ ಅಶ್ವಿನ್ ನಾಯ್ಕ್ ಅವರು ತಿಳಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಜ.28ರಂದು ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಯಾವುದೇ ಕ್ರೀಡೆ ಮಾನಸಿಕ ದೈಹಿಕ ಆರೋಗ್ಯಕ್ಕೆ ಪೂರಕ, ಈ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದಕ್ಕೆ ಸಂತಸವಾಗಿದೆ ಎಂದು ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.
ಸಮಾರಂಭವನ್ನು ಉದ್ಘಾಟಿಸಿದ ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಅವರು ಶುಭ ಹಾರೈಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಹಿರಿಯ ಕ್ರೀಡಾಪಟು ಕಸ್ತೂರಿ ಬಾಲಕೃಷ್ಣ ಪೈ,ದತ್ತಾತ್ರೇಯ, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ.ಬಿ.ಹರೀಶ್ ರೈ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಕಾರ್ಯಕ್ರಮ ಸಂಯೋಜಕರಾದ ವಿಲ್ಪ್ರೇಡ್ ಡಿ’ಸೋಜ, ದಯಾ ಕುಕ್ಕಾಜೆ ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಅವರು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ವಂದಿಸಿದರು.