ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ 2023 ಕಾರ್ಯಕ್ರಮ ಜು.09 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗುತ್ತಿದೆ.
ಕಾರ್ಯಕ್ರಮವನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗಿಯಾಗಿದ್ದಾರೆ.