
ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್ ಅವರು ರವಿವಾರ ಉದ್ಘಾಟಿಸಿದರು.
ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನುಡಿದಂತೆ ನಡೆದಿರುವ ಪಕ್ಷ ಕಾಂಗ್ರೆಸ್, ನಮ್ಮ ಸರ್ಕಾರವು ಗ್ಯಾರಂಟಿ ಕಾರ್ಯಕ್ರಮಗಳನ್ನು ಮುಂದುವರಿಸುವುದಕ್ಕೆ ಬದ್ಧವಾಗಿದೆ. ನಾವು ಅಧಿಕಾರದಲ್ಲಿರುವ ಐದು ವರ್ಷಗಳೂ ಈ ಗ್ಯಾರಂಟಿ ಕಾರ್ಯಕ್ರಮಗಳೂ ಮುಂದುವರಿಯಲಿವೆ. ಈ ಕುರಿತು ದಾರಿ ತಪ್ಪಿಸುವ ಯಾರ ಹೇಳಿಕೆಗಳಿಗೂ ಜನರು ಕಿವಿಗೊಡಬೇಕಾಗಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಐವನ್ ಡಿಸೋಜ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೇಟ್ ಪಿಂಟೊ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಪಾಲಿಕೆ ಸದಸ್ಯರಾದ ಅನಿಲ್ ಕುಮಾರ್, ಭಾಸ್ಕರ ಮೊಯಿಲಿ, ಶಶಿಧರ ಹೆಗ್ಡೆ, ಮುಖಂಡರಾದ ಜೆ.ಆರ್.ಲೋಬೊ, ಸುರೇಂದ್ರ ಕಾಂಬ್ಳಿ, ಕೆ.ಸದಾಶಿವ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.