ವಿಟ್ಲ: ಪರಿಯಾಲ್ತಡ್ಕದ ಪ್ರಗತಿ ಕಾಂಪ್ಲೆಕ್ಸ್ ನಲ್ಲಿ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 13ನೇ ಶಾಖೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು ಸಹಕಾರಿ ಸಂಘಗಳ ಮೂಲಕ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತಲೂ ವ್ಯವಹಾರದಲ್ಲಿ ಮುಂಚೂಣಿಯಲ್ಲಿವೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ಸಂಜೀವ ಪೂಜಾರಿ ಅವರ ದೂರದೃಷ್ಟಿಯಿಂದ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಚೇತರಿಕೆಯಾಗಿದೆ. ನಿಮ್ಮೆಲ್ಲರ ಸಹಕಾರದಿಂದ ಸಹಕಾರಿ ಸಂಘದ ಬಲವರ್ಧನೆಯಾಗಲಿ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಪಟಿಕ್ಕಲ್ಲು, ಮನೆಲಾ ಚರ್ಚ್ ಧರ್ಮಗುರು ನೆಲ್ಸನ್ ಒಲಿವೆರಾ, ಪರಿಯಾಲ್ತಡ್ಕ ಜುಮ್ಮಾ ಮಸೀದಿ ಅಧ್ಯಕ್ಷ ಎಂ.ಎಸ್.ಮಹಮ್ಮದ್, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಡಾ|ರಾಜಾರಾಮ್ ಕೆ.ಬಿ ಭಾಗವಹಿಸಿದ್ದರು.
ಪುತ್ತೂರಿನ ಹಿರಿಯ ವಕೀಲ ಕಿಶೋರ್ ಕೊಳತ್ತಾಯ ಉಳಿತಾಯ ನಿಧಿ ಮತ್ತು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ. ಚೇಳೂರು ಸ್ವಾಗತಿಸಿದರು. ರಮೇಶ್ ಅನ್ನಪಾಡಿ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.




