ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ಇದರ ಲೇಡೀಸ್ ಕ್ಲಬ್, ಮಹಿಳಾ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ಮತ್ತು ಐಕ್ಯೂಎಸಿ ಇವರ ಸಂಯುಕ್ತ ಆಶ್ರಯದಲ್ಲಿ ಲೇಡೀಸ್ ಕ್ಲಬ್ ಉದ್ಘಾಟನೆ ಹಾಗೂ “ಯುವಜನರಲ್ಲಿ ಸಮಗ್ರ ಆರೋಗ್ಯ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 25ರ ಶುಕ್ರವಾರದಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಅಕ್ಷಯ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್ ಅವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಯುವತಿಯರ ಸಬಲೀಕರಣ ಮತ್ತು ಸುರಕ್ಷಿತ ಕ್ಯಾಂಪಸ್ ವಾತಾವರಣದ ಮಹತ್ವವನ್ನು ಒತ್ತಿ ಹೇಳಿದರು.
ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಧುನಿಕ ಸಮಾಜದಲ್ಲಿ ಮಹಿಳೆಯರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಸುಲೇಖಾ ವರದರಾಜ್ ಅವರು ಸಮಗ್ರ ಆರೋಗ್ಯದ ಬಗ್ಗೆ ಒಳನೋಟವುಳ್ಳ ಮಾತುಗಳನ್ನಾಡಿದರು. ಯುವಜನರು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಅವಶ್ಯಕತೆ, ಒತ್ತಡ ನಿರ್ವಹಣೆ ಮತ್ತು ಆರೋಗ್ಯಕರ ಜೀವನಶೈಲಿಯ ಬಗ್ಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ, ಐಕ್ಯೂಎಸಿ ಸಂಯೋಜಕರಾದ ಶ್ರೀಮತಿ ರಶ್ಮಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಲೇಡೀಸ್ ಕ್ಲಬ್ನ ಸಂಚಾಲಕಿ ಶ್ರೀಮತಿ ಪಾವನ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಪ್ರಭಾರವರು ಮುಖ್ಯ ಅತಿಥಿಯ ಪರಿಚಯ ಮಾಡಿದರು.ಕುಮಾರಿ ಮೇಘಾಶ್ರೀ ಸ್ವಾಗತಿಸಿ ಕುಮಾರಿ ಸಿಂಧು ಧನ್ಯವಾದ ಸಮರ್ಪಣೆ ಮಾಡಿದರು.ವಿದ್ಯಾರ್ಥಿನಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.




