ಮಂಗಳೂರು: ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗಣ್ಯರು ಡಾ|ಬಿ.ಆರ್ ಅಂಬೇಡ್ಕರ್ ಹಾಗೂ ಕುದ್ಮಲ್ ರಂಗ ರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿಯಾದ ಮುಲ್ಲೈ ಮುಗಿಲನ್ ಎಂ.ಪಿ., ಜಿ.ಪಂ ಸಿಇಒ ಡಾ|ಆನಂದ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.