ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜು.06 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ – ಪ್ರೌಡಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರಜೆಯನ್ನು ಘೋಷಿಸಿದೆ.