ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರ ಏರಿಕೆ: ಸರಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ

Share with

ಉಡುಪಿ: ರಾಜ್ಯ ಸರ್ಕಾರ ಕೆಎಸ್ಸಾರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನವೆಂಬರ್ 4ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿರುವ ಪರಿಷ್ಕೃತ ದರದಂತೆ ಕೆಎಸ್ಸಾರ್ಟಿಸಿ ಸೇರಿದಂತೆ ಮೂರು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರದಲ್ಲಿ ಸರಾಸರಿ ಶೇ.23ರಷ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನ ಬಿಎಂಟಿಸಿ ಬಸ್ ಪ್ರಯಾಣ ದರದಲ್ಲಿ ಶೇ.33ರಿಂದ 35ರಷ್ಟು ಏರಿಕೆ ಮಾಡಲಾಗಿದೆ.

ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ, ತುಟ್ಟಿಭತ್ಯೆ ಹಾಗೂ ಬಸ್ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವರು ಸಮರ್ಥಿಸಿಕೊಂಡಿದ್ದಾರೆ. ಆದರೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮತ್ತಷ್ಟು ಹೊರೆಯಾಗಲಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ದರ ಏರಿಕೆ ಖಂಡಿಸಿ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿವೆ.


Share with

Leave a Reply

Your email address will not be published. Required fields are marked *