IND A vs AUS A: ಪ್ರಿಯಾಂಶ್, ಶ್ರೇಯಸ್ ಶತಕ; ಆಸೀಸ್ ವಿರುದ್ಧ 413 ರನ್ ಚಚ್ಚಿದ ಭಾರತ

Share with

ಕಾನ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ಎ ವಿರುದ್ಧದ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಭಾರತ ಎ (India A vs Australia A) ತಂಡದ ನಾಯಕತ್ವವಹಿಸಿಕೊಂಡಿರುವ ಶ್ರೇಯಸ್ ಅಯ್ಯರ್ (Shreyas Iyer) ಭರ್ಜರಿ ಶತಕ ಸಿಡಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್ನಲ್ಲಿ ಕೇವಲ 75 ಎಸೆತಗಳನ್ನು ತೆಗೆದುಕೊಂಡ ಶ್ರೇಯಸ್ ಅಯ್ಯರ್ 12 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ ಕೂಡ ಬಾರಿಸಿದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಶ್ರೇಯಸ್ ಅಯ್ಯರ್ ಶತಕದ ಇನ್ನಿಂಗ್ಸ್ ಆಡಿದರು. ಇನ್ನು ಇದೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ಗೂ ಮುನ್ನ ಆರಂಭಿಕ ಪ್ರಿಯಾಂಶ್ ಆರ್ಯ ಕೂಡ ಶತಕ ಸಿಡಿಸಿದ್ದರು. ಇವರಿಬ್ಬರ ಶತಕದ ನೆರವಿನಿಂದ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ ಬರೋಬ್ಬರಿ 413 ರನ್ ಕಲೆಹಾಕಿದೆ.


ಶ್ರೇಯಸ್ ಅಯ್ಯರ್ ಶತಕ
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ಪರ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಪ್ರಿಯಾಂಶ್ ಆರ್ಯ 84 ಎಸೆತಗಳಲ್ಲಿ 101 ರನ್ ಗಳಿಸಿದರೆ, ಪ್ರಭ್ಸಿಮ್ರಾನ್ 56 ರನ್ ಗಳಿಸಿದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ನಾಯಕ ಶ್ರೇಯಸ್ ಅಯ್ಯರ್ ಕಾಂಗರೂ ಬೌಲರ್‌ಗಳನ್ನು ಹೈರಾಣಾಗಿಸಿದರು. ಅಂತಿಮವಾಗಿ ಶ್ರೇಯಸ್ 12 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ ಸಹಿತ 84 ಎಸೆತಗಳಲ್ಲಿ 110 ರನ್‌ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು.


Share with

Leave a Reply

Your email address will not be published. Required fields are marked *