IND vs AUS: ರೋಹಿತ್ ಎದುರು 176.5 ಕಿ.ಮೀ ವೇಗದಲ್ಲಿ ಬೌಲ್ ಮಾಡಿದ್ರ ಸ್ಟಾರ್ಕ್?

Share with

ಆಸ್ಟ್ರೇಲಿಯಾ ಮತ್ತು ಭಾರತ (India vs Australia) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 7 ವಿಕೆಟ್ಗಳ ಜಯ ಸಾಧಿಸಿತು. ಇದು ಪಂದ್ಯದ ಫಲಿತಾಂಶವಾದರೆ, ಇನ್ನು ಇದೇ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ (Mitchell Starc) ವೇಗದ ಬೌಲಿಂಗ್ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಈ ವೇಳೆ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಅವರು ಎಸೆದ ಅದೊಂದು ಎಸೆತದ ವೇಗ ಎಲ್ಲರಲ್ಲೂ ಅಚ್ಚರಿಯನ್ನುಂಟು ಮಾಡಿದೆ.

176.5 ಕಿ.ಮೀ ವೇಗ
ಭಾರತದ ಇನ್ನಿಂಗ್ಸ್‌ನ ಮೊದಲ ಓವರ್ ಅನ್ನು ಮಿಚೆಲ್ ಸ್ಟಾರ್ಕ್ ಬೌಲ್ ಮಾಡಿದರು. ಈ ವೇಳೆ ಸ್ಟ್ರೈಕ್ನಲ್ಲಿದ್ದ ರೋಹಿತ್ ಶರ್ಮಾ ಎದುರಿಸಿದ ಮೊದಲ ಚೆಂಡು ಸ್ಪೀಡ್ ಗನ್‌ನಲ್ಲಿ 176.5 ಕಿ.ಮೀ ವೇಗವನ್ನು ತೋರಿಸಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಇಂಟರ್ನೆಟ್‌ನಲ್ಲಿ ವೈರಲ್ ಆದವು. ಈ ವಿಷಯ ತಿಳಿದ ಕ್ರಿಕೆಟ್ ಅಭಿಮಾನಿಗಳು ಕೂಡ ಅಚ್ಚರಿಗೊಂಡರು.

ಪಂದ್ಯ ಹೀಗಿತ್ತು
ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಮಳೆಯಿಂದಾಗಿ ಪಂದ್ಯವನ್ನು ನಾಲ್ಕು ಬಾರಿ ನಿಲ್ಲಿಸಬೇಕಾಯಿತು, ಇದರಿಂದಾಗಿ ತಲಾ 26 ಓವರ್‌ಗಳನ್ನು ಆಡಲು ನಿರ್ಧರಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 26 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳಿಗೆ 136 ರನ್ ಗಳಿಸಿತು. ಡಕ್‌ವರ್ತ್-ಲೂಯಿಸ್ ನಿಯಮದಡಿಯಲ್ಲಿ, ಆಸ್ಟ್ರೇಲಿಯಾ ಗೆಲ್ಲಲು 131 ರನ್‌ಗಳ ಗುರಿಯನ್ನು ಪಡೆಯಿತು. ನಾಯಕ ಮಿಚೆಲ್ ಮಾರ್ಷ್ ಅವರ ಅದ್ಭುತ ಇನ್ನಿಂಗ್ಸ್ ಆಧಾರದ ಮೇಲೆ ಆಸ್ಟ್ರೇಲಿಯಾ 21.1 ಓವರ್‌ಗಳಲ್ಲಿ ಮೂರು ವಿಕೆಟ್‌ಗಳಿಗೆ 131 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು.


Share with

Leave a Reply

Your email address will not be published. Required fields are marked *