ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

2025ರ ಸೆ.18 ರಂದು ದೂರುದಾರ ಬಂಟ್ವಾಳ ತಾಲೂಕಿನ ನಿವಾಸಿ ಅಬ್ದುಲ್ ರಹಿಮಾನ್ (36) ಅವರು ತಮ್ಮ ಮೊಬೈಲ್ನಲ್ಲಿ ಫೇಸ್ಬುಕ್ ಅಪ್ಲಿಕೇಶನ್ ವೀಕ್ಷಿಸುತ್ತಿದ್ದಾಗ ಹಲವರು ಪ್ರತಿಕ್ರಿಯೆ ನೀಡಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಫೇಸ್ಬುಕ್ ಪೇಜ್ ವೊಂದರಲ್ಲಿ ಸಮುದಾಯಗಳ ನಡುವೆ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವ ರೀತಿಯ ಕಾಮೆಂಟ್ ಹಾಕಿರುವುದು ಕಂಡುಬಂದಿದೆ.
ಈ ಕುರಿತು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ




