ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

Share with

ಪ್ರಸ್ತುತ ಭಾರತ ಮಹಿಳಾ ಪಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಅದರ ಭಾಗವಾಗಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಹರ್ಮನ್ಪ್ರೀತ್ ಕೌರ್ ಪಡೆ ಪ್ರವಾಸವನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿದ್ದ ಭಾರತ ವನಿತಾ ಪಡೆ, ಎರಡನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಆದರೆ ಮೂರನೇ ಹಾಗೂ ಸರಣಿ ನಿರ್ಧಾರಕ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಸ್ಪಿನ್ ಮ್ಯಾಜಿಕ್ನ ನೆರವಿನಿಂದ ಭಾರತ ತಂಡ ಮೂರನೇ ಪಂದ್ಯವನ್ನು 17 ರನ್ಗಳಿಂದ ಗೆದ್ದುಕೊಂಡು ಸರಣಿ ವಶಪಡಿಸಿಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 176 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 159 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ಟೀಂ ಇಂಡಿಯಾ 10 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡುವ ಮೂಲಕ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಇದಕ್ಕೂ ಮೊದಲು, ಭಾರತೀಯ ಮಹಿಳಾ ತಂಡವು 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಗೆದ್ದಿತ್ತು. ಅಡಿಲೇಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಕಳಪೆ ಆರಂಭ ಸಿಕ್ಕಿತು. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಮೂರನೇ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ಆದಾಗ್ಯೂ, ಆ ಬಳಿಕ ಜೊತೆಯಾದ ಸ್ಮೃತಿ ಮಂಧಾನ ಮತ್ತು ಜೆಮಿಮಾ ರೊಡ್ರಿಗಸ್ 121 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ನಿರ್ಮಿಸಿದರು. ಮಂಧಾನ ಕೇವಲ 55 ಎಸೆತಗಳಲ್ಲಿ 82 ರನ್ ಗಳಿಸುವ ಮೂಲಕ ಕಾಂಗರೂಗಳ ನಾಡಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದರು. ಜೆಮಿಮಾ ಕೂಡ ಅರ್ಧಶತಕ ಬಾರಿಸಿ ತಂಡವನ್ನು 176 ರನ್‌ಗಳ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು. ಇತ್ತ ಅನ್ನಾಬೆಲ್ ಸದರ್ಲ್ಯಾಂಡ್ ಆಸ್ಟ್ರೇಲಿಯಾ ಪರ ಎರಡು ವಿಕೆಟ್‌ ಪಡೆದರು.


Share with

Leave a Reply

Your email address will not be published. Required fields are marked *