ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸವನ್ನು ನಿರ್ಮಿಸಿದ ಭಾರತ

Share with

ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನೇ ಬರೆದಿದೆ.

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಬಿಲ್ಲುಗಾರಿಕೆಯಲ್ಲಿ ಭಾರತ ನಾಲ್ಕು ಪದಕಗಳನ್ನು ಬಾಚಿಕೊಂಡ ಬೆನ್ನಲ್ಲೇ ಇದೀಗ ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನೇ ಬರೆದಿದೆ. ಭಾರತಕ್ಕೆ ಪ್ರಶಸ್ತಿ ತಂದುಕೊಟ್ಟ ಅಥ್ಲೀಟ್‌ಗಳನ್ನು ಪ್ರಧಾನಿ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟರ್ ಮಾಡಿದ ಪ್ರಧಾನಿ ಮೋದಿ ಅವರು “ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮಹತ್ವದ ಸಾಧನೆ! ನಾವು 100 ಪದಕ ಗೆಲ್ಲುವ ಮೂಲಕ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದು ಭಾರತದ ಜನ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ,” ಎಂದು ತಮ್ಮ ‘X’ ಖಾತೆಯಲ್ಲಿ ಬರೆದಿದ್ದಾರೆ. ಅಕ್ಟೋಬರ್ 10 ರಂದು ಏಷ್ಯನ್ ಗೇಮ್ಸ್ ತಂಡದ ಕ್ರೀಡಾಪಟುಗಳನ್ನು ಮಾತನಾಡಲು ಎದುರು ನೋಡುತ್ತಿದ್ದು, ಅಲ್ಲಿ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ಪ್ರಧಾನಿ ಹೇಳಿದರು.

ಶುಕ್ರವಾರದಂದು ಏಷ್ಯನ್ ಗೇಮ್ಸ್ ನಲ್ಲಿ ಶತಕದ ಗಡಿಯಲ್ಲಿದ್ದ ಭಾರತ ತಂಡವು ಆರ್ಚರಿ ಮತ್ತು ಮಹಿಳಾ ಕಬಡ್ಡಿಯಲ್ಲಿ ಮೂರು ಬ್ಯಾಕ್ ಟು ಬ್ಯಾಕ್ ಚಿನ್ನದ ಪದಕಗಳನ್ನು ಗೆದ್ದು ದೇಶದ ಪದಕಗಳ ಸಂಖ್ಯೆಯನ್ನು 100ಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.

ಭಾರತವು ಏಷ್ಯನ್ ಗೇಮ್ಸ್ ನಲ್ಲಿ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚು ಸೇರಿದಂತೆ 100 ಪದಕಗಳನ್ನು ಗೆಲ್ಲುವ ಮೂಲಕ 100 ಪದಕಗಳ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ.


Share with

Leave a Reply

Your email address will not be published. Required fields are marked *