ದೆಹಲಿ: ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂಪಾಯಿ ವೆಚ್ಚದಲ್ಲಿ ರಫೇಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವರ್ಚುವಲ್ ಮೀಟಿಂಗ್ ನಡೆದು ಅಲ್ಲೇ ಒಪ್ಪಂದಕ್ಕೆ ಮುದ್ರೆ ಹಾಕಲಾಯಿತು.
ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ ನಿಂದ ಫೈಟರ್ ಜೆಟ್ ಗಳನ್ನು ಖರೀದಿಸುತ್ತಿದೆ. ಈ ಸಂದರ್ಭ ಸಹಿ ಸಮಾರಂಭದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು ವಾರಗಳ ನಂತರ ಮೆಗಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.