ಮುಂಬೈ: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಕುಸಲ್ ಮೆಂಡಿಸ್ ನೇತೃತ್ವದ ಶ್ರೀಲಂಕಾ ಮುಖಾಮುಖಿ ಆಗಲಿದೆ.
ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಆರು ಪಂದ್ಯಗಳ ಪೈಕಿ ಎಲ್ಲ ಆರು ಮ್ಯಾಚ್‌ಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಏಳನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಂದಿನ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್‌ಗೆ ಏರಲಿದೆ. ಎಂದಿನಂತೆ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.