
ಇಂದು ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ 2025ರ ICC ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

ನ್ಯೂಜಿಲೆಂಡ್ 252 ರನ್ಗಳ ಗುರಿ ನೀಡಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಕ್ಯಾಪ್ಟನ್ ರೋಹಿತ್ ಶರ್ಮಾ, ಉಪನಾಯಕ ಶುಭ್ಮನ್ ಗಿಲ್ ಓಪನಿಂಗ್ ಮಾಡಿದರು. ಶುಭ್ಮನ್ ಗಿಲ್ ಕೇವಲ 31 ರನ್ಗೆ ವಿಕೆಟ್ ಒಪ್ಪಿಸಿದರು.
ಆಡಿದ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನು ಗೆಲ್ಲಿಸಿದರು. ರಾಹುಲ್ 1 ಸಿಕ್ಸರ್, 1 ಫೋರ್ ಸಮೇತ 34 ರನ್ ಸಿಡಿಸಿದರು. ಭಾರತ 49 ಓವರ್ನಲ್ಲಿ 254 ರನ್ ಗಳಿಸಿ ಗೆಲುವು ಸಾಧಿಸಿದೆ.
ಈ ಅಮೋಘ ಗೆಲುವು.. ICC ODI ವಿಶ್ವಕಪ್‌ನ ಸೆಮಿಫೈನಲ್-2019, ICC WTC ಫೈನಲ್-2021 ಹಾಗೂ ICC ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ 25 ವರ್ಷಗಳ ಹಿಂದಿನ ಸೇಡನ್ನು ತೀರಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಈಗ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.




