ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಟೆಸ್ಟ್ ಬಳಿಕ ಏಕದಿನ ಸರಣಿಯಲ್ಲೂ ಜಯಭೇರಿ ಮೊಳಗಿಸಿದೆ.
ಭಾರತ ತಂಡವೀಗ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.
ಮಂಗಳವಾರ ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 351 ರನ್ ಗಳಿಸಿತು. ಸಂಜು ಸ್ಯಾಮ್ಸನ್ (51) ಮತ್ತು ಕೊನೆಯಲ್ಲಿ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ (ಅಜೇಯ 70, 52 ಎ.) ಅವರೂ ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು