ನವೆಂಬರ್ 2 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳಿಂದ ಮಣಿಸಿದ್ದ ಭಾರತ ವನಿತಾ ಪಡೆ, 52 ವರ್ಷಗಳ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಭಾರತದ ಸಿಂಹಿಣಿಯರ ಈ ಐತಿಹಾಸಿಕ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಅಭಿಮಾನಿಗಳಿಂದ ಹಿಡಿದು ಮಾಜಿ ಕ್ರಿಕೆಟಿಗರು, ಸೆಲೆಬ್ರೆಟಿಗಳು ಸೇರಿದಂತೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಹರ್ಮನ್ಪ್ರೀತ್ ಕೌರ್ ಪಡೆಯನ್ನು ಅಭಿನಂದಿಸಿದ್ದರು. ಇದೀಗ ವಿಶ್ವಕಪ್ ಮುಗಿದ ಮೂರು ದಿನಗಳ ಬಳಿಕ ಮಹಿಳಾ ಪಡೆ, ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದೆ.





