ಭಾರತದಲ್ಲಿ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ‘ಸೆಂಟರ್ ಆಫ್ ಎಕ್ಸಲೆನ್ಸ್’ ನ್ನು ಬೆಂಗಳೂರಿನಲ್ಲಿ ಆರಂಭಿಸಲಾಯಿತು. ಈ ಕೇಂದ್ರವನ್ನು IT,BT ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ಇದು ದೇಶದ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಕರ್ನಾಟಕವನ್ನು ರಾಷ್ಟ್ರೀಯ ಬಾಹ್ಯಾಕಾಶ ನವೀನತೆ ಕೇಂದ್ರವಾಗಿ ಸ್ಥಾಪಿಸುವ ದಿಕ್ಕಿನಲ್ಲಿ ಮುಂದಾಗಿದೆ. ಇದು ಸಂಶೋಧನೆ, ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.




