ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಐತಿಹಾಸಿಕ ಗೆಲುವು: ಅಭಿನಂದನೆ ಸಲ್ಲಿಸಿದ ಪ್ರಧಾನಿ

Share with

ಅಭಿನಂದನೆ ಸಲ್ಲಿಸಿದ ಪ್ರಧಾನಿ.

ಅಹಮದಾಬಾದ್‌: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್‌ನಲ್ಲಿ ಸತತ 8ನೇ ಭಾರಿ ಗೆಲುವು ಸಾಧಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಪಾಕಿಸ್ತಾನ 42.5 ಓವರ್‌ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

ಐಸಿಸಿ ಏಕದಿನ ವಿಶ್ವಕಪ್-2023 ರ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತವು ಭರ್ಜರಿ ಜಯ ಸಾಧಿಸಿದ್ದು, ಭಾರತ ತಂಡಕ್ಕೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಇದು ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ 8 ನೇ ಗೆಲುವಾಗಿದ್ದು,  ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯವನ್ನು ಮೆರೆದರು. ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ 10 ಓವರ್ ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ರವೀಂದ್ರ ಜಡೇಜಾ 9.5 ಓವರ್ ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. 


Share with

Leave a Reply

Your email address will not be published. Required fields are marked *