ಹರಿಯಾಣ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ರೆಬೆಲ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ 35.5 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಫೋರ್ಬ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಸಾವಿತ್ರಿ ಜಿಂದಾಲ್(Savitri Jindal) ಗೆಲುವು ಸಾಧಿಸಿದ್ದಾರೆ.
ಪ್ರಮುಖವಾಗಿ ಬಿಜೆಪಿಯ ಕುರುಕ್ಷೇತ್ರ ಸಂಸದ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರ ತಾಯಿ,ಶ್ರೀಮಂತ ಮಹಿಳಾ ಉದ್ಯಮಿ ಸಾವಿತ್ರಿ ಜಿಂದಾಲ್ ಅವರು ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಗೆಲುವಿನ ಸಿಹಿ ಕಂಡಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಜಿದ್ದಾಜಿದ್ದಿನ ಹೋರಾಟದಲ್ಲಿ ಮೂವರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಆ ಪೈಕಿ ಸಾವಿತ್ರಿ ಹೆಚ್ಚು ಸುದ್ದಿಯಾಗಿದ್ದಾರೆ. ಹಿಸಾರ್ ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು.