ಪುಣಚ: ರೈತರಿಗೆ ಮಾಹಿತಿ ಕಾರ್ಯಕ್ರಮ

Share with

ವಿಟ್ಲ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ರೈತರಿಗೆ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ‌ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಪರಂಪರಾಗತ ಮತ್ತು ಆಧುನಿಕ ತಂತ್ರಜ್ಞಾನಗಳನ್ನು ಸದ್ಬಳಕೆ ಮಾಡಿಕೊಂಡು ತೊಡಗಿಸಿಕೊಂಡರೆ ಕೃಷಿಕ ನಷ್ಟ ಅನುಭವಿಸುವ ಸಾಧ್ಯತೆ ಎಂದು ಅಭಿಪ್ರಾಯ ಪಟ್ಟರು.
ಪುಣಚ ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ ಅಧ್ಯಕ್ಷತೆ ವಹಿಸಿದ್ದರು.
ತೋಟಗಾರಿಕಾ ಇಲಾಖೆ ಅಧಿಕಾರಿ ಪ್ರದೀಪ್, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ, ಪುಣಚ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಮೈ ಜನಾರ್ದನ ಭಟ್ , ಉಪಾಧ್ಯಕ್ಷ ಪ್ರೀತಮ್ ಪೂಂಜ, ಉಪಸ್ಥಿತರಿದ್ದರು. ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಮತ್ತು ಅದರ ನಿರ್ವಹಣೆ ಹಾಗೂ ವೈಜ್ಞಾನಿಕ ಬೇಸಾಯ ಕ್ರಮಗಳು., ಬೆಳೆ ವಿಮೆ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ರೈತರ ಜತೆ ಸಂವಾದ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿ ಪಿ ಸಿ ಆರ್ ಐ )ಯ ವಿಜ್ಞಾನಿ ಡಾ. ಭವಿಷ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ನೂರಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು. ತೋಟಗಾರಿಕೆ ಇಲಾಖೆಯ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.


Share with