ಮಂಗಳೂರು: ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ ನೀಡಲು 95% ಕೆಲಸ ಸಂಪೂರ್ಣ ಆಗಿದೆ ಇನ್ನೂ 5% ಕೆಲಸ ಮಾತ್ರ ಬಾಕಿ: ಶಾಸಕ ವೇದವ್ಯಾಸ್ ಕಾಮತ್

Share with

ಮಂಗಳೂರು: ತುಳು ಭಾಷೆಗೆ ರಾಜ್ಯಭಾಷೆಯ ಸ್ಥಾನಮಾನ ದೊರಕಬೇಕು ಎನ್ನುವ ನಿಟ್ಟಿನಲ್ಲಿ ಮಂಗಳೂರು ಉರ್ವಸ್ಟೋರ್​ನ ತುಳುಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

ಮಾಧ್ಯಮದವರ ಜೊತೆಗೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್

ಈ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು “ಬೇರೆ ರಾಜ್ಯಗಳು ಒಂದಕ್ಕಿಂತ ಹೆಚ್ಚು ಭಾಷೆಯನ್ನು ಯಾವ ರೀತಿ ಅಧಿಕೃತ ಭಾಷೆಯಾಗಿ ಮಾಡಿದರು ಎನ್ನುವ ಸಂಪೂರ್ಣ ವರದಿಯನ್ನು ರಾಜ್ಯ ಸರಕಾರ ಈಗಾಗಲೇ ಪಡೆದಿದೆ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಮ್ಮುಖದಲ್ಲಿ ಕ್ಯಾಬಿನೆಟ್ ನಲ್ಲಿ ಆದೇಶ ಮಾಡಲು ಮಾತ್ರ ಬಾಕಿಯಾಗಿದೆ. 95% ಕೆಲಸ ಸಂಪೂರ್ಣ ಆಗಿದೆ. 5% ಕೆಲಸ ಮಾತ್ರ ಬಾಕಿ ಆಗಿದೆ. ಆದಷ್ಟು ಬೇಗ ನಮ್ಮ ಬೇಡಿಕೆ ಪೂರೈಸಬೇಕಾಗಿ ನಮ್ಮ ಆಶಯ ಎಂದು ಹೇಳಿದರು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಮುಂದಾಳತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷ, ಜಾತಿ ಬೇಧ ಮರೆತು ಎಲ್ಲರೂ ಒಂದಾಗಿ ಭಾಗವಹಿಸಿದರು. ತುಳುಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ರಾಜ್ಯ ಸರಕಾರಕ್ಕೆ ಒತ್ತಡ ಹಾಕಬೇಕು, ನಂತರ ಸರಕಾರದಿಂದ ಪ್ರತಿಕ್ರಿಯೆ ಸಿಗದಿದ್ದಲಿ ಹೋರಾಟ, ಉಪವಾಸ ಸತ್ಯಾಗ್ರಹ ಮಾಡಬೇಕು ಎಂದು ತೀರ್ಮಾನ ಮಾಡಿದರು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಮಾತನಾಡಿ, ತುಳುವಿಗೆ ಅಧಿಕೃತ ಸ್ಥಾನಮಾನ ಸಿಕ್ಕಿದರೆ ಪರವೂರಿನಿಂದ ಬಂದ ಕಂಪೆನಿಗಳಲ್ಲಿ ಊರಿನ ಜನರಿಗೆ ಕೆಲಸ ಸಿಗುತ್ತದೆ, ಉಡುಪಿ ದ.ಕ ಜಿಲ್ಲೆಯ ಸಂಸತ್ ಸದಸ್ಯ ಸ್ಥಾನಕ್ಕೆ ನಿಲ್ಲುವ ಅಭ್ಯರ್ಥಿಗಳಿಗೆ ತುಳು ಭಾಷೆ ಅಧಿಕೃತ ಮಾಡುವ ಬಗ್ಗೆ ತನ್ನ ವೋಟಿನ ಪ್ರಣಾಳಿಕೆಯನ್ನು ಘೋಷಣೆ ಮಾಡಬೇಕು ಎಂದು ಹೇಳಿದರು.


Share with

Leave a Reply

Your email address will not be published. Required fields are marked *