ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆ; ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ: ಪ್ರಧಾನಿ ಮೋದಿ ಟ್ವೀಟ್

Share with

ನವದೆಹಲಿ: ಮಹಿಳಾ ದಿನಾಚರಣೆ ದಿನದಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಬರೊಬ್ಬರಿ 100 ರೂಪಾಯಿಗಳನ್ನು ಕಡಿಮೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಬರೊಬ್ಬರಿ 100 ರೂಪಾಯಿಗಳನ್ನು ಕಡಿಮೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *