ಉಪ್ಪಳ: ಮಂಗಲ್ಪಾಡಿ ಪಂಚಾಯತಿನ 2022-23 ವಾರ್ಷಿಕ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿಗೆ ಒಳಪಟ್ಟ ಉನ್ನತ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಂಚಿಕೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆಯೆಂದು ಸೋಶಿಯಲ್ ಆಡಿಟಿಂಗ್ ಮುಖಾಂತರ ತಿಳಿದು ಬಂದಿರುವುದರಿಂದ ಇದರ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ಎದುರಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮಂಗಲ್ಪಾಡಿ ಪಂಚಾಯತ್ ಸಮಿತಿ ಹಾಗೂ ನೇತಾರರಾದ ವಿಜಯ ಕುಮಾರ್ ರೈ, ವಸಂತ ಕುಮಾರ್ ಮಯ್ಯ, ಅನಿಲ್ ಕುಮಾರ್.ಕೆಪಿ, ದಿನೇಶ್ ಮುಳಿಂಜ ಅಧಿಕೃತರಿಗೆ ಒತ್ತಾಯಿಸಿದ್ದಾರೆ.


ಮಂಗಲ್ಪಾಡಿ ಪಂಚಾಯತಿನ 7 ಮತ್ತು 19 ವಾರ್ಡ್ ನಲ್ಲಿ ವಾಸಿಸುತ್ತಿರುವ ಮೂವರು ವಿದ್ಯಾರ್ಥಿಗಳ ಹೆಸರಿನಲ್ಲಿ ಲ್ಯಾಪ್ ಟಾಪ್ ಪಡಕೊಂಡತೆ ನಖಲಿ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಸರಕಾರದ ಯೋಜನೆಯಿಂದ ವಂಚಿತರಾಗಿದ್ದಾರೆ ಇದಕ್ಕೆದುರಾಗಿ ಜಿಲ್ಲಾ ಅಧಿಕಾರಿ ಹಾಗೂ ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆಗೆ ದೂರು ನೀಡಲಾಗಿದೆಯೆಂದು ಬಿಜೆಪಿ ಮಂಗಲ್ಪಾಡಿ ಪಂಚಾಯತ್ ಸಮೀತಿ ಪತ್ರ ಪ್ರಕಟಣೆ ಮೂಲಕ ತಿಳಿಸಿದ್ದಾರೆ




