ಉಪ್ಪನ್ನು ಹೆಚ್ಚಾಗಿ ತಿನ್ನುತ್ತಿದ್ದರೆ ಅಪಾಯ!

ಉಪ್ಪನ್ನು ಅತಿಯಾಗಿ ಸೇವಿಸಿದರೆ, ಅದು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಇದು ಬುದ್ದಿಮಾಂದ್ಯತೆಯಂತಹ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ರಕ್ತದೊತ್ತಡ, ಹೃದ್ರೋಗ, ಹೃದಯಾಘಾತದಂತಹ ಮಾರಣಾಂತಿಕ ಕಾಯಿಲೆಗಳಿಗೂ ತುತ್ತಾಗುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಉಪ್ಪಿನ ಬದಲು ಬೆಳ್ಳುಳ್ಳಿ, ಮೆಣಸು, ಶುಂಠಿ ಮತ್ತು ನಿಂಬೆ ರಸದಂತಹ ಪರ್ಯಾಯಗಳನ್ನು ಬಳಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಸಲಹೆ ನೀಡಿದ್ದಾರೆ.




