
ಸಕಲೇಶಪುರ: ಹೊರಗಿನ ಜನರಿಗೆ ಸ್ವರ್ಗವೆಂದು ಪ್ರಸಿದ್ಧವಾದ ಊರು, ಆದರೆ. ನಮ್ಮ ತಾಲೂಕಿನಲ್ಲಿ ಆಧಾರ್ ಕಾರ್ಡ್ಗಳನ್ನು ಮಾಡಿಸುವ ಒಂದೇ ಸೆಂಟರ್ ಇರುವ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ.
ಜನರು ಹೊಸ ಆಧಾರ್ ಕಾರ್ಡ್ಗಳನ್ನು ಪಡೆಯಲು ಮತ್ತು ಆಧಾರ್ಗೆ ಸಂಬಂಧಿಸಿದ ಸೇವೆಗಳನ್ನು ಪಡೆಯಲು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ನಿವಾಸಿಗಳು ಬೇರೆ ತಾಲೂಕುಗಳಿಗೆ ಅಥವಾ ದೂರದ ಕೇಂದ್ರಗಳಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಅಗತ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು, ನಮ್ಮ ತಾಲೂಕಿನಲ್ಲಿ ಆದಷ್ಟು ಶೀಘ್ರವಾಗಿ ಆಧಾರ್ ನೋಂದಣಿ ಕೇಂದ್ರವನ್ನು ಸ್ಥಾಪಿಸಬೇಕೆಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡುತ್ತಿದ್ದಾರೆ.





