ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ: ಸೆ.5ರಂದು ಜಾರಿ!

Share with

ಧಾರವಾಡ: ‘ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವ ಕಾರ್ಯಕ್ರಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೆ.5ರಂದು ಶಿಕ್ಷಕರ ದಿನ ಈ ಕಾರ್ಯಕ್ರಮ ಅನುಷ್ಠಾನವಾಗಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇನ್ನು ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ದೇಶದಲ್ಲಿನ ಪ್ರಜೆಗಳೆಲ್ಲರೂ ಅನ್ಯೋನ್ಯವಾಗಿ ಬಾಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂಬುದು ಈ ಕಾರ್ಯಕ್ರಮ ಆಶಯ ಎಂದು ಅವರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಕೆಲವು ಸಮಸ್ಯೆಗಳು ಇವೆ. ಕೆಲವೆಡೆ ಶಾಲಾ ಕಟ್ಟಡ ಸಮಸ್ಯೆ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳು ಇವೆ. ಇನ್ನು ಎರಡು ವರ್ಷಗಳಲ್ಲಿ ಈ ಸಮಸ್ಯೆಗಳನ್ನು ಪರಿಹರಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.


Share with

Leave a Reply

Your email address will not be published. Required fields are marked *